ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿಗೆ ₹3,207 ಕೋಟಿ ಲಾಭ

Published 31 ಜನವರಿ 2024, 14:13 IST
Last Updated 31 ಜನವರಿ 2024, 14:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಮಾರುತಿ ಸುಜುಕಿ ಕಂಪನಿಯು ₹3,207 ಕೋಟಿ ನಿವ್ವಳ ಲಾಭ ಗಳಿಸಿದೆ. 

ಹಿಂದಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಕಂಪನಿಯು ₹2,406 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 33ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಈ ತ್ರೈಮಾಸಿಕದಲ್ಲಿ ಒಟ್ಟು ಕಾರ್ಯಾಚರಣೆ ವರಮಾನವು ₹29,251 ಕೋಟಿಯಿಂದ ₹33,513 ಕೋಟಿಗೆ ಏರಿಕೆಯಾಗಿದೆ. ಅಲ್ಲದೇ, ಇದೇ ಅವಧಿಯಲ್ಲಿ 5,01,207 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷ ಈ ಅವಧಿಯಲ್ಲಿ 4,65,911 ಮಾರಾಟವಾಗಿದ್ದವು. 

ಹಿಂದಿನ ಹಣಕಾಸು ವರ್ಷದ ಏಪ್ರಿಲ್‌–ಡಿಸೆಂಬರ್‌ ಅವಧಿಯಲ್ಲಿ ಕಂಪನಿಯು ಒಟ್ಟು ₹5,576 ಕೋಟಿ ನಿವ್ವಳ ಲಾಭ ಗಳಿಸಿತ್ತು. 2023–24ರ ಇದೇ ಅವಧಿಯಲ್ಲಿ ₹9,536 ಕೋಟಿಗೆ ಏರಿಕೆಯಾಗಿದೆ. ಕಾರ್ಯಾಚರಣೆ ವರಮಾನವು ₹86,196 ಕೋಟಿಯಿಂದ ₹1.03 ಲಕ್ಷ ಕೋಟಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT