ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ನಿವ್ವಳ ಲಾಭ ಶೇ 20ರಷ್ಟು ಹೆಚ್ಚಳ

Last Updated 28 ಜನವರಿ 2021, 12:35 IST
ಅಕ್ಷರ ಗಾತ್ರ

ನವದೆಹಲಿ: ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿ ಇರುವ ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಡಿಸೆಂಬರ್ ತ್ರೈಮಾಸಿಕದಲ್ಲಿ ₹ 1,996.7 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 1,587 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇಕಡ 26ರಷ್ಟು ಏರಿಕೆಯಾಗಿದೆ.

ಕಂಪನಿಯ ಒಟ್ಟಾರೆ ವರಮಾನ ಶೇ 13ರಷ್ಟು ಹೆಚ್ಚಾಗಿದ್ದು, ₹ 20,721 ಕೋಟಿಗಳಿಂದ ₹ 23,471 ಕೋಟಿಗಳಿಗೆ ಏರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್‌ ತ್ರೈಮಾಸಿಕದಲ್ಲಿ 4.95 ಲಕ್ಷ ವಾಹನಗಳನ್ನು ಮಾರಾಟ ಮಾಡಿದ್ದು ಹಿಂದಿನ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕ್ಕೆ ಹೋಲಿಸಿದರೆ ಶೇ 13.4ರಷ್ಟು ಏರಿಕೆಯಾಗಿದೆ. ದೇಶಿ ಮಾರಾಟ ಶೇ 13ರಷ್ಟು, ರಫ್ತು ಶೇ 20.6ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT