ಮಂಗಳವಾರ, ಆಗಸ್ಟ್ 16, 2022
29 °C

ನಿಷೇಧದ ಸುಳಿವಿನ ಬೆನ್ನಲ್ಲೇ ಕ್ರಿಪ್ಟೋಕರೆನ್ಸಿ ಮೌಲ್ಯದಲ್ಲಿ ಭಾರಿ ಕುಸಿತ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಿದೆ ಎಂಬ ವರದಿಗಳ ಬೆನ್ನಲ್ಲೇ, ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಕುಸಿತ ಕಂಡುಬಂದಿದೆ.

ಮಂಗಳವಾರ ರಾತ್ರಿಯೇ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಶೇ 15ರಷ್ಟು ಇಳಿಕೆ ಕಂಡುಬಂದಿದೆ. ಬಿಟ್‌ಕಾಯಿನ್‌ ಮೌಲ್ಯದಲ್ಲಿ ಶೇ 17, ಎಥೇರಿಯಂ ಶೇ 15 ಹಾಗೂ ಟೆದರ್ ಮೌಲ್ಯದಲ್ಲಿ ಶೇ 18ರಷ್ಟು ಇಳಿಕೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸೋಲಾನಾ, ಕಾರ್ಡಾನೊ ಹಾಗೂ ಬಿನಾನ್ಸ್ ಮೌಲ್ಯದಲ್ಲಿಯೂ ಕುಸಿತ ಕಂಡುಬಂದಿದೆ. ಸೋಲಾನಾ ಮೌಲ್ಯ ಶೇ 1.24ರಷ್ಟು, ಕಾರ್ಡಾನೊ ಮೌಲ್ಯ ಶೇ 6.62ರಷ್ಟು ಇಳಿಕೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಓದಿ: 

ಆರ್‌ಬಿಐಯಿಂದ ಅಧಿಕೃತ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡುವ ಮೂಲಕ ದೇಶದ ಕೆಲವು ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ‘ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021’ ಅನ್ನು ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮಂಗಳವಾರ ವರದಿಯಾಗುತ್ತು. ಕರ್ನಾಟಕದಲ್ಲಿ ಕೋಟ್ಯಂತರ ಮೌಲ್ಯದ ಬಿಟ್‌ಕಾಯಿನ್ ಹಗರಣ ನಡೆದಿದೆ ಎಂಬ ಆರೋಪವು ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರವು ಈ ಮಸೂದೆ ಮಂಡನೆಗೆ ಮುಂದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು