ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

8 ಕಂಪನಿಗಳ ಎಂ–ಕ್ಯಾಪ್‌ ಏರಿಕೆ

Published 9 ಜೂನ್ 2024, 12:57 IST
Last Updated 9 ಜೂನ್ 2024, 12:57 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವಾರದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಏರಿಕೆ ಕಂಡಿದ್ದರಿಂದ ಬಿಎಸ್‌ಇಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳ ಪೈಕಿ 8 ಕಂಪನಿಗಳ ಮಾರುಕಟ್ಟೆ ಮೌಲ್ಯವು ₹3.28 ಲಕ್ಷ ಕೋಟಿ ಏರಿಕೆಯಾಗಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ ₹80,828 ಕೋಟಿ ಗಳಿಸಿದೆ. ಇದರಿಂದ ಕಂಪನಿಯ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್‌) ₹14.08 ಲಕ್ಷ ಕೋಟಿ ದಾಟಿದೆ.

ಹಿಂದುಸ್ತಾನ್‌ ಯೂನಿಲಿವರ್‌ ₹58,258 ಕೋಟಿ, ರಿಲಯನ್ಸ್‌ ಇಂಡಸ್ಟ್ರೀಸ್‌ ₹54,024 ಕೋಟಿ, ಇನ್ಫೊಸಿಸ್ ₹52,770 ಕೋಟಿ, ಎಚ್‌ಡಿಎಫ್‌ಸಿ ಬ್ಯಾಂಕ್‌ ₹32,241 ಕೋಟಿ, ಭಾರ್ತಿ ಏರ್‌ಟೆಲ್‌ ₹32,080 ಕೋಟಿ, ಐಟಿಸಿ ₹16,167 ಕೋಟಿ ಹಾಗೂ ಐಸಿಐಸಿಐ ಬ್ಯಾಂಕ್‌ನ ಮಾರುಕಟ್ಟೆ ಮೌಲ್ಯಕ್ಕೆ ₹1,745 ಕೋಟಿ ಸೇರ್ಪಡೆಯಾಗಿದೆ.

ಎಲ್‌ಐಸಿ ₹12,080 ಕೋಟಿ ಮತ್ತು ಎಸ್‌ಬಿಐ ಎಂ–ಕ್ಯಾಪ್‌ ₹178 ಕೋಟಿ ಇಳಿಕೆ ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT