ಶನಿವಾರ, ಮೇ 28, 2022
30 °C

ದಾಖಲೆ ಮಟ್ಟಕ್ಕೆ ಬಿಎಸ್‌ಇ ಕಂಪನಿಗಳ ಬಂಡವಾಳ ಮೌಲ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಆಗಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ ಮೌಲ್ಯವು ಸೋಮವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆಯ ಮೊತ್ತವಾದ ₹ 280 ಲಕ್ಷ ಕೋಟಿಗೆ ಹೆಚ್ಚಳ ಆಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರ 85 ಅಂಶ ಏರಿಕೆ ಕಂಡು 61,308 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 52 ಅಂಶ ಏರಿಕೆ ಕಂಡಿತು.

‘ಆಟೊಮೊಬೈಲ್‌ ಕಂಪನಿಗಳ ಷೇರುಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂತು. ಆಟೊಮೊಬೈಲ್ ಕಂಪನಿಗಳು ವಾಹನಗಳ ಬೆಲೆ ಹೆಚ್ಚಿಸಿದ್ದು, ವಿದ್ಯುತ್ ಚಾಲಿತ ವಾಹನಗಳಿಗೆ ಆದ್ಯತೆ ಸಿಗುತ್ತಿರುವುದು ಇದಕ್ಕೆ ಕಾರಣ. ಅಲ್ಲದೆ, ಆಟೊಮೊಬೈಲ್ ವಲಯಕ್ಕೆ ಸಂಬಂಧಿಸಿದಂತೆ ವಿನಿಮಯ ವಹಿವಾಟು ನಿಧಿ (ಇಟಿಎಫ್) ಆರಂಭವಾಗಿದ್ದು ಕೂಡ ಒಂದು ಕಾರಣ’ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಸಂಶೋಧನಾ ಮುಖ್ಯಸ್ಥ ಎಸ್. ರಂಗನಾಥನ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆಯು ಶೇಕಡ 0.26ರಷ್ಟು ಇಳಿಕೆ ಆಗಿದ್ದು, ಪ್ರತಿ ಬ್ಯಾರೆಲ್‌ಗೆ 85.84 ಡಾಲರ್‌ಗೆ ತಲುಪಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 10 ಪೈಸೆ ಇಳಿಕೆ ಆಗಿದ್ದು, ₹ 74.25ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು