ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಕಂಪನಿಗಳ ಎಂ–ಕ್ಯಾಪ್‌ ₹2.90 ಲಕ್ಷ ಕೋಟಿ ಏರಿಕೆ

Published 4 ಫೆಬ್ರುವರಿ 2024, 14:08 IST
Last Updated 4 ಫೆಬ್ರುವರಿ 2024, 14:08 IST
ಅಕ್ಷರ ಗಾತ್ರ

ನವದೆಹಲಿ: ಪ್ರಮುಖ 10 ಕಂಪನಿಗಳ ಪೈಕಿ 8 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ (ಎಂ–ಕ್ಯಾಪ್‌) ಕಳೆದ ವಾರ ₹2.90 ಲಕ್ಷ ಕೋಟಿ ಏರಿಕೆಯಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಹೆಚ್ಚು ಗಳಿಕೆ ಕಂಡಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಟಾಟಾ ಕನ್ಸಲ್ಟೆನ್ಸಿ ಸರ್ವಿಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಇನ್ಫೊಸಿಸ್‌, ಎಲ್‌ಐಸಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಹಿಂದುಸ್ತಾನ್‌ ಯೂನಿಲಿವರ್‌ ಮೌಲ್ಯ ಹೆಚ್ಚಾಗಿದೆ. ಭಾರ್ತಿ ಏರ್‌ಟೆಲ್‌ ಮತ್ತು ಐಟಿಸಿಯ ಮೌಲ್ಯ ಇಳಿಕೆಯಾಗಿದೆ. 

ರಿಲಯನ್ಸ್‌ ಇಂಡಸ್ಟ್ರೀಸ್‌ ₹1.38 ಲಕ್ಷ ಕೋಟಿ, ಟಿಸಿಎಸ್‌ ₹57,867 ಕೋಟಿ, ಎಸ್‌ಬಿಐ ₹33,467 ಕೋಟಿ, ಎಲ್‌ಐಸಿ ₹26,158 ಕೋಟಿ, ಐಸಿಐಸಿಐ ಬ್ಯಾಂಕ್‌ ₹10,522 ಕೋಟಿ, ಇನ್ಫೊಸಿಸ್‌ ₹9,566 ಕೋಟಿ, ಎಚ್‌ಡಿಎಫ್‌ಸಿ ಬ್ಯಾಂಕ್‌ ₹8,771 ಕೋಟಿ, ಹಿಂದುಸ್ತಾನ್‌ ಯೂನಿಲಿವರ್‌ ₹5,627 ಕೋಟಿ ಎಂ–ಕ್ಯಾಪ್‌ ಗಳಿಸಿವೆ.

ಐಟಿಸಿ ₹18,931 ಕೋಟಿ ಮತ್ತು ಭಾರ್ತಿ ಏರ್‌ಟೆಲ್‌ ₹5,231 ಕೋಟಿಯಷ್ಟು ಮಾರುಕಟ್ಟೆ ಮೌಲ್ಯ ಕಳೆದುಕೊಂಡಿವೆ.

ಎಲ್ಲ ಕಂಪನಿಗಳ ಪೈಕಿ ರಿಲಯನ್ಸ್‌ ಇಂಡಸ್ಟ್ರೀಸ್‌ ಗಳಿಕೆಯಲ್ಲಿ ಮುಂಚೂಣಿಯಲ್ಲಿದೆ. ನಂತರ ಟಿಸಿಎಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಇನ್ಫೊಸಿಸ್‌, ಭಾರ್ತಿ ಏರ್‌ಟೆಲ್‌, ಎಲ್‌ಐಸಿ, ಎಸ್‌ಬಿಐ, ಹಿಂದುಸ್ತಾನ್‌ ಯೂನಿಲಿವರ್ ಮತ್ತು ಐಟಿಸಿ ಇವೆ.

ಕಳೆದ ವಾರ ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ 1,384 ಅಂಶ (ಶೇ 1.95) ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT