ಸೋಮವಾರ, ಆಗಸ್ಟ್ 10, 2020
23 °C

ಮರ್ಸಿಡಿಸ್‌ ಬೆಂಜ್: ಹಬ್ಬದಲ್ಲಿ ವಾಹನ ಮಾರಾಟ ಚೇತರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹಬ್ಬಗಳ ಸಂದರ್ಭದಲ್ಲಿ ವಾಹನಗಳ ಮಾರಾಟದಲ್ಲಿ ಇನ್ನಷ್ಟು ಚೇತರಿಕೆ ಕಂಡುಬರಲಿದೆ’ ಎಂದು ಮರ್ಸಿಡಿಸ್‌ ಬೆಂಜ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮಾರ್ಟಿನ್‌ ಶ್ವೆಂಕ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಂಪನಿಯು ಈ ವರ್ಷ 10 ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ. ಆದರೆ, ಲಾಕ್‌ಡೌನ್‌ನಿಂದಾಗಿ ಜಾಗತಿಕ ಪೂರೈಕೆ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗಿರುವ ಕಾರಣ ಕೆಲವು ಉತ್ಪನ್ನಗಳ ಬಿಡುಗಡೆ ವಿಳಂಬವಾಗುವ ಸಾಧ್ಯತೆಯೂ ಇದೆ ಎಂದು ಕಂಪನಿ ಹೇಳಿದೆ.

‘ನಾನು ಆಶಾವಾದಿ. ಪ್ರತಿ ಬಾರಿ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ನಡೆಯುವಂತೆ ದೊಡ್ಡ ಮಟ್ಟದ ಸಂಭ್ರಮಾಚರಣೆ ಲಾಕ್‌ಡೌನ್‌ ನಿರ್ಬಂಧಗಳ ಕಾರಣದಿಂದಾಗಿ ಇಲ್ಲದೇ ಇರಬಹುದು. ಆದರೆ, ಜನರು ಹಬ್ಬವನ್ನಂತೂ ಆಚರಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಸ್ಥಳೀಯವಾಗಿ ಅಲ್ಲಲ್ಲಿ ಲಾಕ್‌ಡೌನ್‌ ಜಾರಿಗೊಳಿಸುತ್ತಿರುವುದರಿಂದ ಗ್ರಾಹಕರು ವಾಹನ ಖರೀದಿಯನ್ನು ಮುಂದೂಡುವಂತಾಗಿದೆ. ವಾಹನ ಮಾರಾಟ ಮಂದಗತಿಯಲ್ಲಿ ಇರುವುದು ತಾತ್ಕಾಲಿಕ ಹಿನ್ನಡೆಯಾಗಿದೆ. ಹಾಗಂತ ದೇಶದ ಮಾರುಕಟ್ಟೆಯ ಕುರಿತಾದ ನಮ್ಮ ಯೋಜನೆಯಲ್ಲಿ ಮತ್ತು ಉತ್ಪನ್ನಗಳ ಬಿಡುಗಡೆಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘10 ಕಾರುಗಳನ್ನು ಬಿಡುಗಡೆ ಮಾಡುವ ಗುರಿ ಇಟ್ಟುಕೊಂಡಿದ್ದು, ಏಳು ಕಾರು‌ಗಳನ್ನು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ‌ಚಾಲಿತ ಕಾರು‌ ‘ಇಕ್ಯುಸಿ’ ಅನ್ನು ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಬೇಕಿತ್ತು. ಆದರೆ ಅದು ಕೆಲವು ವಾರಗಳು ತಡವಾಗಲಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು