5ಜಿ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ 2022ರಲ್ಲಿ ಪರೀಕ್ಷಾರ್ಥ ಸೇವೆ

ನವದೆಹಲಿ: ದೂರಸಂಪರ್ಕ ಸೇವಾ ಕಂಪನಿಗಳು ಬೆಂಗಳೂರು, ಮುಂಬೈ, ಕೋಲ್ಕತ್ತ, ಹೈದರಾಬಾದ್, ಚೆನ್ನೈ ಸೇರಿದಂತೆ ಕೆಲವು ಪ್ರಮುಖ ನಗರಗಳು ಮತ್ತು ಮಹಾನಗರಗಳಲ್ಲಿ 5ಜಿ ಸೇವೆಗೆ 2022ರಲ್ಲಿ ಪರೀಕ್ಷಾರ್ಥ ಚಾಲನೆ ನೀಡಲಿವೆ ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ.
ದೂರಸಂಪರ್ಕ ಸೇವಾ ಪೂರೈಕೆದಾರರರಿಗೆ ಆವರ್ತನಗಳ (ಫ್ರೀಕ್ವೆನ್ಸಿ) ನಿಯೋಜನೆ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪ್ರಾರಂಭಿಸಲಾಗುವುದು ಎಂದು ಇಲಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಏರ್‌ಟೆಲ್, ಜಿಯೊ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳನ್ನು ಒಳಗೊಂಡು ಎಲ್ಲಾ ಕಂಪನಿಗಳೂ 2022ರಲ್ಲಿ 5ಜಿ ಸೇವೆಗೆ ಪರೀಕ್ಷಾರ್ಥವಾಗಿ ಚಾಲನೆ ನೀಡಲಿವೆ ಎಂದು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.