ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಫ್‌ನಲ್ಲಿ ಹೂಡಿಕೆ ₹ 1.24 ಲಕ್ಷ ಕೋಟಿ

Last Updated 27 ಜುಲೈ 2020, 14:59 IST
ಅಕ್ಷರ ಗಾತ್ರ

ನವದೆಹಲಿ: ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಬಂಡವಾಳ ಹೂಡಿಕೆದಾರರು ವಿವಿಧ ಮ್ಯೂಚುವಲ್ ಫಂಡ್‌ ಯೋಜನೆಗಳಲ್ಲಿ ಒಟ್ಟು ₹ 1.24 ಲಕ್ಷ ಕೋಟಿ ತೊಡಗಿಸಿದ್ದಾರೆ.

ಅದಕ್ಕೂ ಹಿಂದಿನ ಮೂರು ತಿಂಗಳ ಅವಧಿಯಲ್ಲಿ ₹ 94,200 ಕೋಟಿ ಹಿಂದಕ್ಕೆ ಪಡೆದಿದ್ದರು ಎಂದು ಭಾರತೀಯ ಮ್ಯೂಚುವಲ್‌ ಫಂಡ್‌ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ಮಾಹಿತಿ ನೀಡಿದೆ.

ಮ್ಯೂಚುವಲ್‌ ಫಂಡ್‌ ಉದ್ಯಮದ 45 ಕಂಪನಿಗಳ ನಿರ್ವಹಣಾ ಸಂಪತ್ತು ಜೂನ್‌ ಅಂತ್ಯಕ್ಕೆ ಶೇಕಡ 14ರಷ್ಟು ಹೆಚ್ಚಾಗಿದ್ದು, ₹ 25.5 ಲಕ್ಷ ಕೋಟಿಗಳಿಗೆ ತಲುಪಿದೆ. ಮಾರ್ಚ್‌ ಅಂತ್ಯದಲ್ಲಿ ಇದು ₹ 22.26 ಲಕ್ಷ ಕೋಟಿ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT