ಸ್ಯಾನ್ ಫ್ರಾನ್ಸಿಸ್ಕೊ: ಮೈಕ್ರೊಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಅವರು ಸಮಾಜಸೇವೆಗೆ ಹೆಚ್ಚಿನ ಸಮಯ ನೀಡುವ ಉದ್ದೇಶದಿಂದ ಸಂಸ್ಥೆಯ ನಿರ್ದೇಶಕ ಮಂಡಳಿಯಿಂದ ನಿರ್ಗಮಿಸಿದ್ದಾರೆ.

64 ವರ್ಷದ ಅವರು ದಶಕದ ಹಿಂದೆಯೇ ಸಂಸ್ಥೆಯ ದೈನಂದಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದನ್ನು ನಿಲ್ಲಿಸಿದ್ದರು ಹಾಗೂ ತಮ್ಮ ಮತ್ತು ಪತ್ನಿ ಮೆಲಿಂದಾ ಹೆಸರಿನಲ್ಲಿರುವ ಪ್ರತಿಷ್ಠಾನದ ಚಟುವಟಿಕೆಗಳಿಗೆ ಹೆಚ್ಚಿನ ಸಮಯವನ್ನು ವಿನಿಯೋಗಿಸಿದ್ದರು.

2104ರವರೆಗೂ ನಿರ್ದೇಶಕ ಮಂಡಳಿಯ ಅಧ್ಯಕ್ಷರಾಗಿದ್ದರು. ಹಲವು ವರ್ಷಗಳು ಅವರ ಜತೆಗೆ ಕೆಲಸ ಮಾಡುವ ಅವಕಾಶ ದೊರೆತಿದ್ದು ಅದೃಷ್ಟ ಎಂದು ಮೈಕ್ರೊಸಾಫ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.