ಸೋಮವಾರ, ಅಕ್ಟೋಬರ್ 21, 2019
23 °C

ಆರ್ಥಿಕ ವೃದ್ಧಿ ದರ ಶೇ 5.8: ಮೂಡೀಸ್ ಅಂದಾಜು

Published:
Updated:

ನವದೆಹಲಿ: ಪ್ರಸಕ್ತ (2019–20) ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ವೃದ್ಧಿ ದರವು ಶೇ 5.8ರಷ್ಟು ಇರಲಿದೆ ಎಂದು ಮೂಡೀಸ್‌ ಇನ್‌ವೆಸ್ಟರ್ಸ್‌ ಸರ್ವಿಸ್‌ ಅಂದಾಜಿಸಿದೆ.

ಭಾರತದ ಆರ್ಥಿಕತೆಯು ತೀವ್ರವಾಗಿ ಪರಿಗಣಿಸಬಹುದಾದ ಆರ್ಥಿಕ ಹಿಂಜರಿತಕ್ಕೆ ಒಳಗಾಗಿದೆ ಎಂದು ಸಂಸ್ಥೆ ವಿಶ್ಲೇಷಿಸಿದೆ. ಇದಕ್ಕೂ ಮೊದಲು ವೃದ್ಧಿ ದರವು ಶೇ 6.2ರಷ್ಟು ಇರಲಿದೆ ಎಂದು ಅಂದಾಜಿಸಿತ್ತು. ಈ ಅಂದಾಜು, ಭಾರತೀಯ ರಿಸರ್ವ್‌ ಬ್ಯಾಂಕ್‌ ಕಳೆದ ವಾರ ಪ್ರಕಟಿಸಿದ್ದ ಶೇ 6.1ಗಿಂತ ಕಡಿಮೆ ಮಟ್ಟದಲ್ಲಿ ಇದೆ.

ಬಂಡವಾಳ ಹೂಡಿಕೆ ಕುಸಿತದಿಂದ ಬೇಡಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)