ಸೆಪ್ಟೆಂಬರ್ 18ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು. ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ತೆರಳಿ ಪೋಷಕರು, ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಲು ಅವಕಾಶವಿದೆ. ಇ–ಎನ್‌ಪಿಎಸ್ ಪೋರ್ಟಲ್ ಮೂಲಕ 2,197 ಖಾತೆ ತೆರೆಯಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್‌ಡಿಎ) ತಿಳಿಸಿದೆ.