ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಪಿ ಹೆಚ್ಚಳ ನಿರಂತರ: ಕೇಂದ್ರ ಸಚಿವ ರಾಜ‌ನಾಥ್ ಸಿಂಗ್

Last Updated 1 ಅಕ್ಟೋಬರ್ 2020, 16:33 IST
ಅಕ್ಷರ ಗಾತ್ರ

ನವದೆಹಲಿ: ‘ಮುಂಬರುವ ವರ್ಷಗಳಲ್ಲಿ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿರಂತರವಾಗಿ ಹೆಚ್ಚಿಸಲಾಗುವುದು’ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್‌ ಭರವಸೆ ನೀಡಿದ್ದಾರೆ.

‘ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಎಣ್ಣೆಕಾಳು ಮತ್ತು ಬೇಳೆಕಾಳುಗಳ ಮೇಲಿನ ಎಂಎಸ್‌ಪಿಯನ್ನು 23 ಬಾರಿ ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಜಮೀನು ಗುತ್ತಿಗೆ ಪಡೆದ ಮಾತ್ರಕ್ಕೆ ಕೃಷಿ ಜಮೀನಿನ ಮಾಲೀಕತ್ವ ತಮ್ಮದೆಂದು ಯಾರೂ ಹೇಳಲಾಗದು. ಮಂಡಿ ವ್ಯವಸ್ಥೆಯನ್ನು ನಿಲ್ಲಿಸಲು ಮುಂದಾಗಿಲ್ಲ. ಬದಲಾಗಿ, ಇನ್ನೂ ಹೆಚ್ಚಿನ ಮಂಡಿಗಳಲ್ಲಿ ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ಆಯ್ಕೆಗಳನ್ನು ನೀಡಲಾಗಿದೆ’ ಎಂದಿದ್ದಾರೆ.

‘ಒಬ್ಬ ರೈತನ ಮಗನಾಗಿ, ನಾನು ಇದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಹಿತಾಸಕ್ತಿಗೆ ವಿರುದ್ಧವಾದ ಏನನ್ನೂ ಮಾಡುವುದಿಲ್ಲ. ಕೃಷಿ ವಲಯಕ್ಕೆ ಸಂಬಂಧಿಸಿದ ಹೊಸ ಕಾನೂನುಗಳು ರೈತರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಸಂಬಂಧಿಸಿವೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರ್ಕಾರದೊಂದಿಗೆ ಮಾತನಾಡುವಂತೆ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT