ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿವಂತರ ಸಾಲಿನಲ್ಲಿ ಮುಕೇಶ್‌ ಅಂಬಾನಿಗೆ 5ನೇ ಸ್ಥಾನ

Last Updated 22 ಜುಲೈ 2020, 15:01 IST
ಅಕ್ಷರ ಗಾತ್ರ

ಬೆಂಗಳೂರು: ಫೋಬ್ಸ್‌ ಪತ್ರಿಕೆ ಸಿದ್ಧಪಡಿಸಿರುವ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಐದನೆಯ ಸ್ಥಾನಕ್ಕೆ ಬಂದಿದ್ದಾರೆ. ಅಮೆರಿಕದ ಹೂಡಿಕೆದಾರ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿ, ಅಂಬಾನಿ ಅವರು ಈ ಸ್ಥಾನ ತಲುಪಿದ್ದಾರೆ.

ಫೋಬ್ಸ್‌ ಪ್ರಕಟಿಸಿರುವ ಪಟ್ಟಿಯಲ್ಲಿ ಇರುವ ಮಾಹಿತಿ ಅನ್ವಯ, ಅಂಬಾನಿ ಅವರ ಒಟ್ಟು ಆಸ್ತಿಯ ಮೌಲ್ಯ ₹ 5.59 ಲಕ್ಷ ಕೋಟಿ. ಅಮೆಜಾನ್‌ ಸಂಸ್ಥಾಪಕ ಜೆಫ್ ಬೆಜೊಸ್, ಮೈಕ್ರೊಸಾಫ್ಟ್‌ನ ಸಹಸಂಸ್ಥಾಪಕ ಬಿಲ್ ಗೇಟ್ಸ್, ಉದ್ಯಮಿ ಬರ್ನಾ ಆರ್ನೊ ಅವರು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ. ನಾಲ್ಕನೆಯ ಸ್ಥಾನದಲ್ಲಿ ಫೇಸ್‌ಬುಕ್‌ ಸಹಸಂಸ್ಥಾಪಕ ಮಾರ್ಕ್‌ ಝಕರ್‌ಬರ್ಗ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT