ಭಾನುವಾರ, ಅಕ್ಟೋಬರ್ 25, 2020
21 °C

ಮುಕೇಶ್ ಅಂಬಾನಿ ನಂ.1 ಶ್ರೀಮಂತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹರೂನ್‌ ಇಂಡಿಯಾ ಸಿದ್ಧಪಡಿಸಿರುವ 2020ನೇ ಸಾಲಿನ ಭಾರತದ ಶ್ರೀಮಂತರ ಪಟ್ಟಿ ಬಿಡುಗಡೆ ಆಗಿದೆ. ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಸತತ ಒಂಭತ್ತನೆಯ ವರ್ಷದಲ್ಲಿಯೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಯನ್ನು ಉಳಿಸಿಕೊಂಡಿದ್ದಾರೆ.

ಹರೂನ್ ಸಿದ್ಧಪಡಿಸುವ ವಿಶ್ವದ ಐದು ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ವ್ಯಕ್ತಿ ಮುಕೇಶ್ ಅಂಬಾನಿ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಹ್ಯಾಪಿಯೆಸ್ಟ್ ಮೈಂಡ್ಸ್ ಕಂಪನಿಯ ಸಂಸ್ಥಾಪಕ ಅಶೋಕ್ ಸೂಟಾ ಅವರು ಈ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರ ಆಸ್ತಿಯ ಮೌಲ್ಯ ₹ 3,700 ಕೋಟಿ. ಅವರು ತಮ್ಮ ಕಂಪನಿಯ ಷೇರುಗಳನ್ನು ಈಚೆಗಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಿದ್ದರು.

ಔಷಧೋದ್ಯಮ, ರಾಸಾಯನಿಕ ಮತ್ತು ಪೆಟ್ರೊಕೆಮಿಕಲ್ಸ್, ಸಾಫ್ಟ್‌ವೇರ್‌ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ಉದ್ಯಮದ ವಲಯದವರು ಶ್ರೀಮಂತರ ಪಟ್ಟಿಯಲ್ಲಿ ಶೇಕಡ 27ರಷ್ಟು ಸ್ಥಾನಗಳನ್ನು ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಇರುವ ಅತ್ಯಂತ ಶ್ರೀಮಂತ ಮಹಿಳೆ ಸ್ಮಿತಾ ವಿ. ಕೃಷ್ಣ. ಇವರ ನಂತರದ ಸ್ಥಾನದಲ್ಲಿರುವ ಮಹಿಳೆ ಕಿರಣ್ ಮಜುಮ್ದಾರ್ ಶಾ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು