ಸೋಮವಾರ, ಆಗಸ್ಟ್ 15, 2022
28 °C

ಮುಕೇಶ್ ಅಂಬಾನಿ ರಾಜೀನಾಮೆ: ‘ಜಿಯೊ’ಗೆ ಆಕಾಶ್ ಅಂಬಾನಿ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿರುವ ರಿಲಯನ್ಸ್‌ ಜಿಯೊ ಕಂಪನಿಯ ಆಡಳಿತ ಮಂಡಳಿಗೆ ಮುಕೇಶ್ ಅಂಬಾನಿ ಅವರು ರಾಜೀನಾಮೆ ಸಲ್ಲಿಸಿದ್ದು, ತಮ್ಮ ಹಿರಿಯ ಪುತ್ರ ಆಕಾಶ್ ಅಂಬಾನಿ ಅವರನ್ನು ಆಡಳಿತ ಮಂಡಳಿಗೆ ಸೇರ್ಪಡೆ ಮಾಡಿದ್ದಾರೆ.

ಆಕಾಶ್ ಅಂಬಾನಿ ಅವರನ್ನು ಕಾರ್ಯನಿರ್ವಾಹಕೇತರ ನಿರ್ದೇಶಕ, ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೆ ಜೂನ್‌ 27ರಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ರಿಲಯನ್ಸ್ ಜಿಯೊ ಇನ್ಫೊಕಾಮ್‌ ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಮುಕೇಶ್ ಅಂಬಾನಿ ಅವರ ರಾಜೀನಾಮೆಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೂಡ ಕಂಪನಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು