ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮಾರುಕಟ್ಟೆ ನಕಾರಾತ್ಮಕ ಅಂತ್ಯ: ಕರಗಿತು ₹4.33 ಲಕ್ಷ ಕೋಟಿ ಸಂಪತ್ತು

Last Updated 17 ಏಪ್ರಿಲ್ 2021, 13:43 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬೈ ಷೇರುಪೇಟೆಯ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯಗೊಂಡಿದೆ. ಇದರಿಂದ ಹೂಡಿಕೆದಾರರ ಸಂಪತ್ತು ₹ 4.33 ಲಕ್ಷ ಕೋಟಿ ಕರಗಿದೆ. ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯ ₹ 205.30 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 759 ಅಂಶಗಳಷ್ಟು ಇಳಿಕೆಯಾಗಿ 48,832 ಅಂಶಗಳಿಗೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 217 ಅಂಶ ಇಳಿಕೆ ಕಂಡು 14,617 ಅಂಶಗಳಿಗೆ ತಲುಪಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇರುವುದು ಷೇರುಪೇಟೆ ಮೇಲೆ ಪರಿಣಾಮ ಉಂಟುಮಾಡುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಈ ತಿಂಗಳಲ್ಲಿ ಇದುವರೆಗೆ ₹ 3,800 ಕೋಟಿ ಮೊತ್ತವನ್ನು ಹಿಂದಕ್ಕೆ ಪಡೆದಿದ್ದಾರೆ. ಹಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ವಹಿವಾಟಿನ ಮೇಲೆ ಪರಿಣಾಮ ಬೀರುತ್ತಿದೆ. ಔಷಧ ವಲಯವನ್ನು ಹೊರತುಪಡಿಸಿ ಉಳಿದೆಲ್ಲಾ ವಲಯಗಳ ಸೂಚ್ಯಂಕಗಳು ವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ. ಈ ತಿಂಗಳು ಆರ್ಥಿಕತೆಯು ಮಂದಗತಿಯಲ್ಲಿ ಇರಲಿದೆ ಎನ್ನುವುದನ್ನು ಹಲವು ಅಂಶಗಳು ಸೂಚಿಸುತ್ತಿರುವ ಮಧ್ಯೆಯೇ ಲೋಹದ ಬೆಲೆ ಗಣನೀಯವಾಗಿ ಹೆಚ್ಚಳ ಆಗುತ್ತಿದೆ. ಇದು ಕೈಗಾರಿಕೆಗಳ ಮೇಲೆ ಪರಿಣಾಮ ಉಂಟುಮಾಡುತ್ತಿದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಸಂಶೋಧನಾ ಮುಖ್ಯಸ್ಥ ಎಸ್‌. ರಂಗನಾಥನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT