ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯೂಚುವಲ್‌ ಫಂಡ್‌ ನಿರ್ವಹಣಾ ಆಸ್ತಿ ಏರಿಕೆ

Last Updated 10 ಜನವರಿ 2023, 12:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ಮ್ಯೂಚುವಲ್‌ ಫಂಡ್ ಉದ್ಯಮ ನಿರ್ವಹಿಸುವ ಆಸ್ತಿಯ ಮೊತ್ತವು 2022ರಲ್ಲಿ ₹ 2.2 ಲಕ್ಷ ಕೋಟಿಯಷ್ಟು ಹೆಚ್ಚಳ ಕಂಡಿದೆ. ಹೂಡಿಕೆದಾರರು ವ್ಯವಸ್ಥಿತ ಹೂಡಿಕೆ ಯೋಜನೆಗಳ (ಎಸ್‌ಐಪಿ) ಮೂಲಕ ನಿರಂತರವಾಗಿ ಹೂಡಿಕೆ ಮಾಡುತ್ತಿರುವುದು ಇದಕ್ಕೆ ಪ್ರಮುಖ ಕಾರಣ.

ಮ್ಯೂಚುವಲ್‌ ಫಂಡ್ ಉದ್ಯಮ ನಿರ್ವಹಿಸುತ್ತಿರುವ ಆಸ್ತಿಯ ಒಟ್ಟು ಮೌಲ್ಯವು ಈಗ ₹ 39.88 ಲಕ್ಷ ಕೋಟಿಗೆ ಏರಿಕೆ ಕಂಡಿದೆ ಎಂದು ದೇಶದ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ತಿಳಿಸಿದೆ. ಆದರೆ 2021ರಲ್ಲಿ ಆಗಿದ್ದ ಬೆಳವಣಿಗೆ ಪ್ರಮಾಣಕ್ಕೆ ಹೋಲಿಸಿದರೆ 2022ರ ಬೆಳವಣಿಗೆಯು ಕಡಿಮೆ ಇದೆ.

‘ಷೇರು ಮಾರುಕಟ್ಟೆಗಳಲ್ಲಿನ ಅನಿಶ್ಚಿತತೆಯ ಕಾರಣದಿಂದಾಗಿ ಉದ್ಯಮವು ಕಡಿಮೆ ಪ್ರಮಾಣದಲ್ಲಿ ಬೆಳವಣಿಗೆ ಕಂಡಿದೆ’ ಎಂದು ಫೈಯರ್ಸ್‌ ಕಂಪನಿಯ ಸಂಶೋಧನಾ ಮುಖ್ಯಸ್ಥ ಗೋಪಾಲ್ ಕವಲಿರೆಡ್ಡಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT