ಮಂಗಳವಾರ, ಮೇ 18, 2021
24 °C

ಮ್ಯೂಚುವಲ್ ಫಂಡ್‌: ಷೇರು ಸಂಬಂಧಿತ ಹೂಡಿಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಷೇರು ಸಂಬಂಧಿತ ಮ್ಯೂಚುವಲ್ ಫಂಡ್‌ಗಳಲ್ಲಿ ಏಪ್ರಿಲ್‌ನಲ್ಲಿ ₹ 4,609 ಕೋಟಿ ಹೂಡಿಕೆಯಾಗಿದೆ. 

ಮಾರ್ಚ್‌ನಲ್ಲಿ ಹೂಡಿಕೆಯಾಗಿದ್ದ ₹ 11,756 ಕೋಟಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಹೂಡಿಕೆ ಪ್ರಮಾಣ ಶೇ. 61ರಷ್ಟು ಕಡಿಮೆಯಾಗಿದೆ ಎಂದು ಭಾರತೀಯ ಮ್ಯೂಚುವಲ್‌ ಫಂಡ್‌ ಸಂಸ್ಥೆಗಳ ಒಕ್ಕೂಟ (ಎಎಂಎಫ್‌ಐ) ಮಾಹಿತಿ ನೀಡಿದೆ.

ಮ್ಯೂಚುವಲ್ ಫಂಡ್‌ ಸಂಸ್ಥೆಗಳ ನಿರ್ವಹಣಾ ಸಂಪತ್ತು ಮೌಲ್ಯ ₹25.27 ಲಕ್ಷ ಕೋಟಿಗಳಿಗೆ ತಲುಪಿದೆ.

ಸಾರ್ವತ್ರಿಕ ಚುನಾವಣೆಯ ಕುರಿತ ಅನಿಶ್ಚಿತ ಸ್ಥಿತಿಯು ಹೂಡಿಕೆ ಚಟುವಟಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಉದ್ಯಮ ವಲಯದ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಐಎಲ್‌ಆ್ಯಂಡ್‌ಎಫ್‌ಎಸ್‌, ಎಸ್ಸೆಲ್‌ ಸೇರಿದಂತೆ ಪ್ರಮುಖ ವಲಯಗಳಲ್ಲಿ ನಗದು ಬಿಕ್ಕಟ್ಟು ತಲೆದೂರಿದೆ. ಇದರಿಂದಾಗಿ ಮ್ಯೂಚುವಲ್‌ ಫಂಡ್‌ಗಳಲ್ಲಿ ಬಂಡವಾಳ ಒಳಹರಿವು ಕಡಿಮೆಯಾಗುತ್ತಿದೆ ಎಂದೂ ತಜ್ಞರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು