ಭಾನುವಾರ, ಮೇ 22, 2022
21 °C

ಗ್ರಾಮೀಣ ಮೂಲಸೌಕರ್ಯ ಯೋಜನೆಗೆ ₹ 16,500 ಕೋಟಿ ವಿತರಣೆ: ನಬಾರ್ಡ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಗ್ರಾಮೀಣ ಭಾಗದಲ್ಲಿ ವಿವಿಧ ಮೂಲಸೌರ್ಯ ಯೋಜನೆಗಳಿಗಾಗಿ ಪ್ರಸಕ್ತ ಹಣಕಾಸು ವರ್ಷದ 10 ತಿಂಗಳಿನಲ್ಲಿ ಒಟ್ಟಾರೆ ₹ 30,200 ಕೋಟಿ ಮಂಜೂರು ಮಾಡಿದ್ದು, ಅದರಲ್ಲಿ 16,500 ಕೋಟಿ ವಿತರಿಸಲಾಗಿದೆ ಎಂದು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ನಬಾರ್ಡ್‌) ಶನಿವಾರ ತಿಳಿಸಿದೆ.

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ (ಆರ್‌ಐಡಿಎಫ್‌) ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.

‘ನಿಧಿಯು ಪ್ರಾರಂಭವಾದಾಗಿನಿಂದ ವಿವಿಧ ಗ್ರಾಮೀಣ ಮೂಲಸೌಕರ್ಯ ಯೋಜನೆಗಳಿಗಾಗಿ ₹ 3.11 ಲಕ್ಷ ಕೋಟಿ ವಿತರಿಸಿದೆ. ಈ ನಿಧಿಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು ಬಂಡವಾಳ ರಚನೆಯ ಶೇ 10ರಷ್ಟಿದೆ’ ಎಂದು ನಬಾರ್ಡ್‌ ಅಧ್ಯಕ್ಷ ಜಿ.ಆರ್‌. ಚಿಂತಾಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2021–22ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರ್‌ಐಡಿಎಫ್‌ಗೆ ನೀಡುವ ಮೊತ್ತವನ್ನು ₹ 30 ಸಾವಿರ ಕೋಟಿಗಳಿಂದ ₹ 40 ಸಾವಿರ ಕೋಟಿಗೆ ಏರಿಕೆ ಮಾಡಿದ್ದಾರೆ. ಅದೇ ರೀತಿ ಸೂಕ್ಷ್ಮ ನೀರಾವರಿ ನಿಧಿಯ ಮೂಲ ಬಂಡವಾಳವನ್ನೂ ₹ 5 ಸಾವಿರ ಕೋಟಿಗಳಿಂದ ₹ 10 ಸಾವಿರ ಕೋಟಿಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಯೋಜನೆಗಳ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದು ಚಿಂತಾಲಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು