ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಬ್ಬರಿ ಖರೀದಿಗೆ ಶೀಘ್ರ ನಾಫೆಡ್‌ ಕೇಂದ್ರ: ಸಚಿವ ಬಿ.ಸಿ. ನಾಗೇಶ್

Last Updated 11 ಜನವರಿ 2023, 19:32 IST
ಅಕ್ಷರ ಗಾತ್ರ

ತಿಪಟೂರು (ತುಮಕೂರು): ಕೊಬ್ಬರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರ ಶೀಘ್ರ ‘ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ’ (ಎನ್‌ಎಎಫ್‌ಇಡಿ–ನಾಫೆಡ್‌) ಕೇಂದ್ರ ಆರಂಭಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಯೋಜನೆ ಅಡಿ ನಾಫೆಡ್‌, ಬೆಳೆಗಾರರಿಂದ ಕೊಬ್ಬರಿ ಖರೀದಿಸಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕೆಲವು ವರ್ಷಗಳಿಂದ ಕ್ವಿಂಟಲ್‌ಗೆ ₹ 15 ಸಾವಿರ ಅಸುಪಾಸಿನಲ್ಲಿದ್ದ ಕೊಬ್ಬರಿ ದರ ಮೂರು ತಿಂಗಳಿನಿಂದ ಕುಸಿದಿದೆ. ಇದರಿಂದ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡು ವರ್ಷದಿಂದ ಕೊಬ್ಬರಿ ಸರಿಯಾದ ಸಮಯಕ್ಕೆ ಬಾರದೇ ಹಸಿ ಅಂಶ ಉಳಿದುಕೊಂಡು ಬೆಳೆಗಾರರಿಗೆ ನಷ್ಟವಾಗುತ್ತಿದೆ’ ಎಂದರು.

ಆರ್ಥಿಕ ತಜ್ಞರೊಂದಿಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದ ನಂತರ ಉಂಡೆ ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹ 11,750ಕ್ಕೆ ನಿಗದಿಪಡಿಸಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ನೀಡಲಾಗುವುದು ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT