ಶನಿವಾರ, ಡಿಸೆಂಬರ್ 3, 2022
26 °C

Nandini Milk Price Hike | ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ ₹3 ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ನಂದಿನಿ ಬ್ರ್ಯಾಂಡ್ ನ ಎಲ್ಲ ಮಾದರಿಯ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ₹3 ಹೆಚ್ಚಳ‌ ಮಾಡಿದೆ.

ಚರ್ಮ ಗಂಟು ರೋಗ, ಅತಿವೃಷ್ಟಿ ಮತ್ತಿತರ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ.  ಹೆಚ್ಚಳ ಮಾಡಿರುವ ಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.

ರಾಜ್ಯದಲ್ಲಿ ಹಾಲು ಉತ್ಪಾದನೆಯ ಪ್ರಮಾಣ 95 ಲಕ್ಷ ಲೀಟರ್ ನಿಂದ 78 ಲಕ್ಷ ಲೀಟರ್ ಗೆ ಕುಸಿದಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು