ಗುರುವಾರ , ಜೂನ್ 30, 2022
22 °C

ಏರ್‌ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಏರ್‌ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಗುರುವಾರ ಹಸ್ತಾಂತರಿಸಲಾಯಿತು. 

ಈ ಹಿನ್ನೆಲೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ಮತ್ತು ಟಾಟಾ ಸನ್ಸ್‌ ಅಧ್ಯಕ್ಷರ ಭೇಟಿಯ ಫೋಟೋವನ್ನು ಪ್ರಧಾನಿ ಕಾರ್ಯಾಲಯವು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. 

ಏರ್‌ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸುವ ನಿರ್ಧಾರಕ್ಕೆ ಅಕ್ಟೋಬರ್‌ 8ರಂದು ಸಹಿ ಹಾಕಲಾಗಿತ್ತು. 

ವಿಮಾನಯಾನ ಕಂಪನಿಯನ್ನು ₹ 18 ಸಾವಿರ ಕೋಟಿಗೆ ಮಾರಾಟ ಮಾಡುವ ಕುರಿತಾದ ಪತ್ರವನ್ನು ಕೇಂದ್ರ ಸರ್ಕಾರವು ಅಕ್ಟೋಬರ್ 11ರಂದು ಟಾಟಾ ಸಮೂಹಕ್ಕೆ ನೀಡಿತು. 

ಅಕ್ಟೋಬರ್‌ 25ರಂದು ಕೇಂದ್ರ ಸರ್ಕಾರ ಮತ್ತು ಟಾಟಾ ಸನ್ಸ್‌ ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು