ಶನಿವಾರ, ಜುಲೈ 2, 2022
26 °C

ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರ ಮುಷ್ಕರ: ಸೇವೆಗಳಿಗೆ ಅಡ್ಡಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಮುಷ್ಕರ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲ ಬ್ಯಾಂಕಿಂಗ್ ಸೇವೆಗಳಿಗೆ ಇಂದು (ಸೋಮವಾರ) ಅಡ್ಡಿ ಉಂಟಾಗಿದೆ.

ಬ್ಯಾಂಕ್‌ ಶಾಖೆಗಳಲ್ಲಿ ಠೇವಣಿ ಇರಿಸುವುದು, ಶಾಖೆಗಳಿಂದ ಹಣ ಹಿಂಪಡೆಯುವುದು, ಚೆಕ್‌ ಕ್ಲಿಯರೆನ್ಸ್ ಮತ್ತು ಸಾಲ ಮಂಜೂರಾತಿ ಸೇವೆಗಳಲ್ಲಿ ಇಂದು ವ್ಯತ್ಯಯವಾಗಿದೆ.

ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರದಲ್ಲಿ ಭಾಗವಹಿಸದ ಕಾರಣ ಖಾಸಗಿ ವಲಯದ ಐಸಿಐಸಿಐ, ಎಚ್‌ಡಿಎಫ್‌ಸಿ ಮತ್ತು ಆಕ್ಸಿಸ್ ಬ್ಯಾಂಕ್‌ಗಳು ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿವೆ.

ಒಂಬತ್ತು ಒಕ್ಕೂಟಗಳನ್ನು ಒಳಗೊಂಡಿರುವ ಯುಎಫ್‌ಬಿಯು ಮಾರ್ಚ್ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿತ್ತು. ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಅಂದಾಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು