ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಯಾರಾ ಎನರ್ಜಿ ಲಾಭ ₹ 3,564 ಕೋಟಿ

Last Updated 13 ಆಗಸ್ಟ್ 2022, 13:24 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾದ ರೊಸ್ನೆಫ್ಟ್ ಕಂಪನಿಯ ಹೂಡಿಕೆ ಇರುವ ನಯಾರಾ ಎನರ್ಜಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹ 3,564 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹139 ಕೋಟಿ ನಷ್ಟ ಅನುಭವಿಸಿತ್ತು.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಲಾಭವು 2021–22ನೇ ಹಣಕಾಸು ವರ್ಷದಲ್ಲಿ ಕಂಪನಿಯು ಗಳಿಸಿದ್ದ ₹1,029 ಕೋಟಿಗಿಂತಲೂ ಹೆಚ್ಚು.

ರಷ್ಯಾ–ಉಕ್ರೇನ್‌ ಸಂಘರ್ಷ ಆರಂಭ ಆದ ಬಳಿಕ ಮಾರ್ಚ್‌ನಿಂದ ರಷ್ಯಾ ದೇಶವು ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಪೂರೈಕೆ ಮಾಡಲು ಆರಂಭಿಸಿತು. ನಯಾರಾ ಎನರ್ಜಿ ಕಂಪನಿಯು ಈ ಅವಕಾಶವನ್ನು ಬಳಸಿಕೊಂಡಿತು. ಖರೀದಿಸಿದ ತೈಲವನ್ನು ರಫ್ತು ಮಾಡುವ ಮೂಲಕ ಲಾಭ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT