ನವದೆಹಲಿ: ಟೊಮೆಟೊ ಬೆಲೆಯು ಸಗಟು ಮಾರುಕಟ್ಟೆಯಲ್ಲಿ ತಗ್ಗಿರುವ ಕಾರಣ, ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್) ಹಾಗೂ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್) ಟೊಮೆಟೊವನ್ನು ಮಂಗಳವಾರದಿಂದ ಕೆ.ಜಿ.ಗೆ ₹50ರಂತೆ ಮಾರಾಟ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಎನ್‌ಸಿಸಿಎಫ್ ಹಾಗೂ ನಾಫೆಡ್ ಜುಲೈನಿಂದ ಟೊಮೆಟೊವನ್ನು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದಲ್ಲಿ ರಿಯಾಯಿತಿ ದರಕ್ಕೆ ಮಾರುತ್ತಿವೆ. ಈ ಎರಡು ಸಂಸ್ಥೆಗಳು ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.