ಸೋಮವಾರ, ಅಕ್ಟೋಬರ್ 26, 2020
24 °C

ನೇರ ತೆರಿಗೆ ಸಂಗ್ರಹ ಶೇ 31ರಷ್ಟು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನಿವ್ವಳ ತೆರಿಗೆ ಸಂಗ್ರಹ ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಶೇ 31ರಷ್ಟು ಇಳಿಕೆ ಆಗಿದ್ದು, ₹ 1.92 ಲಕ್ಷ ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 2.79 ಲಕ್ಷ ಕೋಟಿ ಇತ್ತು.

ಪರೋಕ್ಷ ತೆರಿಗೆ ಸಂಗ್ರಹವು ಶೇ 11ರಷ್ಟು ಇಳಿಕೆಯಾಗಿದ್ದು ₹ 3.42 ಲಕ್ಷ ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 3.85 ಲಕ್ಷ ಕೋಟಿ ಸಂಗ್ರಹವಾಗಿತ್ತು.

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್ ಠಾಕೂರ್ ಅವರು ಲೋಕಸಭೆಗೆ ಈ ಮಾಹಿತಿ ನೀಡಿದ್ದಾರೆ.

ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿನ ಜಿಎಸ್‌ಟಿ ಸಂಗ್ರಹ ₹ 1.81 ಲಕ್ಷ ಕೋಟಿಗಳಷ್ಟಾಗಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.