ನವದೆಹಲಿ: ದೇಶದಲ್ಲಿ 2023–24ನೇ ಆರ್ಥಿಕ ಸಾಲಿನಡಿ ನೇರ ತೆರಿಗೆಯ ನಿವ್ವಳ ಸಂಗ್ರಹವು ಒಟ್ಟು 13.70 ಲಕ್ಷ ಕೋಟಿಯಷ್ಟಾಗಿದೆ ಎಂದು ಕೇಂದ್ರ ಆದಾಯ ತೆರಿಗೆ ಇಲಾಖೆಯು ಸೋಮವಾರ ತಿಳಿಸಿದೆ.
ಕಳೆದ ಸಾಲಿಗೆ ಹೋಲಿಸಿದರೆ ಶೇ 21ರಷ್ಟು ತೆರಿಗೆ ಸಂಗ್ರಹ ಹಿಗ್ಗಿದೆ. ಕಂಪನಿಗಳ ವರಮಾನ ತೆರಿಗೆ (ಸಿಐಟಿ) ಹಾಗೂ ವೈಯಕ್ತಿಕ ಆದಾಯ ತೆರಿಗೆ (ಪಿಐಟಿ) ಮೂಲಕ ಈ ವರ್ಷ ₹18.23 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ಪೈಕಿ ಶೇ 75ರಷ್ಟು ಸಂಗ್ರಹವಾಗಿದೆ ಎಂದು ಹೇಳಿದೆ.
ಒಟ್ಟು 13,70,388 ಕೋಟಿ (ಡಿಸೆಂಬರ್ 17ರ ವರೆಗೆ) ತೆರಿಗೆ ಸಂಗ್ರಹಿಸಲಾಗಿದೆ. ಈ ಪೈಕಿ ಕಂಪನಿಗಳ ವರಮಾನ ತೆರಿಗೆ ಮೊತ್ತ ₹6.95 ಕೋಟಿ ಆಗಿದೆ. ವೈಯಕ್ತಿಕ ಆದಾಯ ತೆರಿಗೆ ಹಾಗೂ ಹೊಸ ಷೇರುಗಳ ವಹಿವಾಟಿನ ಮೇಲಿನ ತೆರಿಗೆಯಿಂದ ₹6.73 ಲಕ್ಷ ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದೆ.
ಅಲ್ಲದೇ, ಡಿಸೆಂಬರ್ 17ರ ವರೆಗೆ ತೆರಿಗೆದಾರರಿಗೆ ₹2.25 ಲಕ್ಷ ಕೋಟಿ ಮರುಪಾವತಿ (ರೀಫಂಡ್) ಮಾಡಲಾಗಿದೆ ಎಂದು ತಿಳಿಸಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ₹11,35,554 ಕೋಟಿ ತೆರಿಗೆ ಸಂಗ್ರಹವಾಗಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.