ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೇರ ತೆರಿಗೆ ಸಂಗ್ರಹ ಶೇ 16.12ರಷ್ಟು ಏರಿಕೆ

Published : 18 ಸೆಪ್ಟೆಂಬರ್ 2024, 16:21 IST
Last Updated : 18 ಸೆಪ್ಟೆಂಬರ್ 2024, 16:21 IST
ಫಾಲೋ ಮಾಡಿ
Comments

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್‌ 17ರ ವರೆಗೆ ₹9.95 ಲಕ್ಷ ಕೋಟಿ ನೇರ ತೆರಿಗೆ ನಿವ್ವಳ ಸಂಗ್ರಹವಾಗಿದೆ. ಇದರಲ್ಲಿ ವೈಯಕ್ತಿಕ ಆದಾಯ ತೆರಿಗೆ ಪಾಲು ಹೆಚ್ಚಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹದಲ್ಲಿ ಶೇ 16.12ರಷ್ಟು ಏರಿಕೆಯಾಗಿದೆ.

ಒಟ್ಟು ₹2.05 ಲಕ್ಷ ಕೋಟಿ ಮರುಪಾವತಿ (ರೀಫಂಡ್‌) ಮಾಡಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮರುಪಾವತಿಯಲ್ಲಿ ಶೇ 56.49ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) ಬುಧವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ವೈಯಕ್ತಿಕ ಆದಾಯ ತೆರಿಗೆಯ ನಿವ್ವಳ ಸಂಗ್ರಹದಲ್ಲಿ ಶೇ 19ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹5.15 ಲಕ್ಷ ಕೋಟಿ ಸಂಗ್ರಹವಾಗಿದೆ. ಕಂಪನಿಗಳ ವರಮಾನ ತೆರಿಗೆ ಸಂಗ್ರಹದಲ್ಲಿ ಶೇ 10.55ರಷ್ಟು ಏರಿಕೆಯಾಗಿದ್ದು, ಒಟ್ಟು ₹4.52 ಲಕ್ಷ ಕೋಟಿ ಸಂಗ್ರಹವಾಗಿದೆ. ₹26,154 ಕೋಟಿ ಷೇರು ವಹಿವಾಟು ತೆರಿಗೆ (ಎಸ್‌ಟಿಟಿ)  ಸಂಗ್ರಹವಾಗಿದೆ.

2024–25ನೇ ಆರ್ಥಿಕ ಸಾಲಿನ ಬಜೆಟ್‌ನಲ್ಲಿ ₹22.12 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ (ವೈಯಕ್ತಿಕ ಆದಾಯ ತೆರಿಗೆ, ಕಾರ್ಪೊರೇಟ್‌ ತೆರಿಗೆ ಮತ್ತು ಇತರೆ ತೆರಿಗೆ). ಕಳೆದ ವರ್ಷಕ್ಕಿಂತ ಶೇ 13ರಷ್ಟು ಹೆಚ್ಚು ಗುರಿ ನಿಗದಿಪಡಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT