ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಲಿದ್ದಾರೆ.
ವಿಧಾನಸಭಾ ಚುನಾವಣೆ ಆಗಿರುವುದರಿಂದ ಯಡಿಯೂರಪ್ಪ ಅವರಿಂದಲೇ ಪ್ರಣಾಳಿಕೆ ಬಿಡುಗಡೆ ಮಾಡಿಸಲು ವರಿಷ್ಠರು ಸೂಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಂದ ಬಿಡುಗಡೆ ಮಾಡಿಸಬೇಕು ಎಂಬ ಬಯಕೆ ರಾಜ್ಯ ನಾಯಕರದ್ದಾಗಿತ್ತು. ಕಾಂಗ್ರೆಸ್ ಪ್ರಣಾಳಿಕೆಯನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದರು.