ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ (ಸಿಜಿಎಂ) ಜೂಹಿ ಸ್ಮಿತಾ ಸಿನ್ಹಾ ಅಧಿಕಾರ ವಹಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ಬ್ಯಾಂಕ್‌ನ ಬೆಂಗಳೂರು ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕಿ, ಮುಂಬೈನ ಕಾರ್ಪೊರೇಟ್ ಕಚೇರಿಯ ಸಾಂಸ್ಥಿಕ ಯೋಜನೆ, ವ್ಯವಸ್ಥೆ ಮತ್ತು ಕಾರ್ಯ ವಿಧಾನ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ.
1995ರಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಬ್ಯಾಂಕ್‌ನಲ್ಲಿ ವೃತ್ತಿ ಆರಂಭಿಸಿದ ಅವರು, ರಿಟೇಲ್ ಬ್ಯಾಂಕಿಂಗ್, ಕಾರ್ಪೊರೇಟ್ ಬ್ಯಾಂಕಿಂಗ್ ಮತ್ತು ಮಾನವ ಸಂಪನ್ಮೂಲ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಂಕಿಂಗ್ ವಲಯದಲ್ಲಿ 29 ವರ್ಷಕ್ಕೂ ಹೆಚ್ಚು ಸೇವಾನುಭವ ಹೊಂದಿದ್ದಾರೆ.
ರಾಜ್ಯದಲ್ಲಿ ಎಸ್‌ಬಿಐ 1,700ಕ್ಕೂ ಹೆಚ್ಚು ಶಾಖೆ/ ಕಚೇರಿಗಳನ್ನು ಹೊಂದಿದೆ. ₹4.90 ಲಕ್ಷ ಕೋಟಿಗೂ ಅಧಿಕ ಜಮಾ–ಖರ್ಚು ಪಟ್ಟಿ (ಬ್ಯಾಲೆನ್ಸ್‌ಶೀಟ್) ಹೊಂದಿದೆ ಎಂದು ಬ್ಯಾಂಕ್ ತಿಳಿಸಿದೆ.