ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಯಕರ್ತರಿಗೆ ₹ 50 ಲಕ್ಷ ವಿಮೆ

Last Updated 30 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ಅರೋಗ್ಯ ಕಾರ್ಯಕರ್ತರಿಗೆ ₹ 50 ಲಕ್ಷ ವಿಮೆ ಒದಗಿಸಲು ಸರ್ಕಾರಿ ಸ್ವಾಮ್ಯದ ನ್ಯೂ ಇಂಡಿಯಾ ಅಶುರನ್ಸ್‌ ಕ್ರಮ ಕೈಗೊಂಡಿದೆ.

ದೇಶದಾದ್ಯಂತ ಇರುವ 22.12 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಪ್ರತಿ ವ್ಯಕ್ತಿಗೆ ₹ 50 ಲಕ್ಷ ಮೊತ್ತದ ವಿಮೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ವಿವರವಾದ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದೆ.

ವೈದ್ಯರು, ದಾದಿಯರು, ಟೆಕ್ನಿಷಿಯನ್ಸ್‌, ಆರೋಗ್ಯ ರಕ್ಷಣೆ ಕಾರ್ಯದಲ್ಲಿ ತೊಡಗಿರುವವರು, ಆಶಾ ಕಾರ್ಯಕರ್ತೆಯರು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಈ ವಿಶೇಷ ವಿಮೆ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಇದು ಅಪಘಾತ ವಿಮೆ ಸೌಲಭ್ಯವನ್ನೂ ಒಳಗೊಂಡಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT