ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬಾಂಡ್‌: ಸೋಮವಾರದಿಂದ 6ನೇ ಕಂತು

Last Updated 29 ಆಗಸ್ಟ್ 2020, 12:31 IST
ಅಕ್ಷರ ಗಾತ್ರ

ಮುಂಬೈ: ಚಿನ್ನದ ಬಾಂಡ್‌ ಯೋಜನೆಯ ಆರನೇ ಕಂತು ಸೋಮವಾರದಿಂದ ಆರಂಭವಾಗಲಿದ್ದು, ಸೆಪ್ಟೆಂಬರ್‌ 4ರವರೆಗೆ ಇರಲಿದೆ.

ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಪ್ರತಿ ಗ್ರಾಂಗೆ ವಿತರಣೆ ಬೆಲೆ ₹ 5,117 ನಿಗದಿ ಪಡಿಸಿದೆ. ಆನ್‌ಲೈನ್‌ ಮೂಲಕ ಬಾಂಡ್‌ ಖರೀದಿಗೆ ಹಣ ಪಾವತಿಸುವವರಿಗೆ ಪ್ರತಿ ಗ್ರಾಂಗೆ ₹ 50 ವಿನಾಯಿತಿ ಇದೆ. ಇಂತಹ ಹೂಡಿಕೆದಾರರಿಗೆ ನೀಡಿಕೆ ಬೆಲೆ ₹ 5,067 ಆಗಲಿದೆ. ಕೇಂದ್ರ ಸರ್ಕಾರದ ಸಮ್ಮುಖದಲ್ಲಿ ಆರ್‌ಬಿಐ ಈ ಬಾಂಡ್‌ಗಳನ್ನು ವಿತರಣೆ ಮಾಡಲಿದೆ.

ಭೌತಿಕ ರೂಪದಲ್ಲಿ ನಿಷ್ಪ್ರಯೋಜಕವಾಗಿರುವ ಚಿನ್ನವನ್ನು ಬಳಕೆಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ 2015ರಲ್ಲಿ ಚಿನ್ನದ ಬಾಂಡ್‌ ಯೋಜನೆ ಜಾರಿಗೆ ತಂದಿತ್ತು. ಬ್ಯಾಂಕ್‌ಗಳು, ಆಯ್ದ ಅಂಚೆ ಕಚೇರಿಗಳು, ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎಸ್‌ಎಚ್‌ಸಿಐಎಲ್), ರಾಷ್ಟ್ರೀಯ ಮತ್ತು ಮುಂಬೈ ಷೇರು ವಿನಿಮಯ ಕೇಂದ್ರಗಳಲ್ಲಿ ಈ ಬಾಂಡ್‌ಗಳನ್ನು ಮಾರಾಟ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT