ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ತೆರಿಗೆಯಲ್ಲಿ ರಾಜ್ಯಗಳಿಗೆ ₹ 92,077 ಕೋಟಿ

Last Updated 21 ಮೇ 2020, 20:00 IST
ಅಕ್ಷರ ಗಾತ್ರ

ನವದೆಹಲಿ : ಏಪ್ರಿಲ್‌–ಮೇ ಅವಧಿಗೆ ಕೇಂದ್ರ ತೆರಿಗೆಯಲ್ಲಿ ರಾಜ್ಯಗಳ ಪಾಲು ₹ 92,077 ಕೋಟಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಏಪ್ರಿಲ್‌ಗೆ ₹ 46,038 ಕೋಟಿ, ಮೇ ತಿಂಗಳಿಗೆ ₹ 46,039 ಕೋಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

2020–21ರ ಬಜೆಟ್‌ ಅಂದಾಜಿನಂತೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದ್ದು, ಸಂಗ್ರಹವಾಗಿರುವ ತೆರಿಗೆಯೊಂದಿಗೆ ಹೊಂದಾಣಿಕೆ ಮಾಡಿಲ್ಲ. ರಾಜ್ಯಗಳಿಗೆ ನಗದು ಹರಿವು ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT