ಬ್ಯಾಂಕ್ ಖಾಸಗೀಕರಣ: ಹೆಸರು ಸೂಚಿಸಿದ ನೀತಿ ಆಯೋಗ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಖಾಸಗಿಯವರಿಗೆ ಮಾರಾಟ ಮಾಡಬೇಕಿರುವ ಬ್ಯಾಂಕ್ಗಳ ಹೆಸರನ್ನು ನೀತಿ ಆಯೋಗವು ‘ಹೂಡಿಕೆ ಹಿಂತೆಗೆತಕ್ಕೆ ಸಂಬಂಧಿಸಿದ ಕಾರ್ಯದರ್ಶಿಗಳ ಸಮಿತಿ’ಗೆ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2021–22ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ, ಖಾಸಗಿಯವರಿಗೆ ಮಾರಾಟ ಮಾಡಬಹುದಾದ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳು ಹಾಗೂ ಒಂದು ವಿಮಾ ಕಂಪನಿಯ ಹೆಸರನ್ನು ಅಂತಿಮಗೊಳಿಸುವ ಹೊಣೆಯನ್ನು ನೀತಿ ಆಯೋಗಕ್ಕೆ ವಹಿಸಲಾಗಿತ್ತು.
ಸಂಪುಟ ಕಾರ್ಯದರ್ಶಿ ನೇತೃತ್ವದ ಕಾರ್ಯದರ್ಶಿಗಳ ಸಮಿತಿಯು ಬ್ಯಾಂಕ್ ಹಾಗೂ ವಿಮಾ ಕಂಪನಿಯ ಹೆಸರಿಗೆ ಒಪ್ಪಿಗೆ ಸೂಚಿಸಿದ ನಂತರ ಅಂತಿಮವಾಗಿ ಕೇಂದ್ರ ಸಂಟದ ಅನುಮೋದನೆ ಪಡೆದುಕೊಳ್ಳಬೇಕಿದೆ.
ಇದನ್ನೂ ಓದಿ– ವಿಶ್ಲೇಷಣೆ: ಕುರಿ ಕಾಯಲು ಒಳ್ಳೆಯ ತೋಳ!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.