ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಆರಂಭದಿಂದ ಇದುವರೆಗೆ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮವು (ಎನ್ಎಂಡಿಸಿ) 5 ಕೋಟಿ ಟನ್ ಕಬ್ಬಿಣದ ಅದಿರನ್ನು ಉತ್ಪಾದನೆ ಮಾಡಿದೆ.

ಒಂದೇ ಆರ್ಥಿಕ ವರ್ಷದಲ್ಲಿ 5 ಕೋಟಿಗೂ ಹೆಚ್ಚು ಟನ್ ಕಬ್ಬಿಣದ ಅದಿರನ್ನು ಉತ್ಪಾದನೆ ಮಾಡಿದ ದೇಶದ ಮೊದಲ ಗಣಿಗಾರಿಕಾ ಕಂಪನಿಯಾಗಿ ಎನ್ಎಂಡಿಸಿ ಇತಿಹಾಸ ನಿರ್ಮಿಸಿದೆ ಎಂದು ಕಂಪನಿ ತಿಳಿಸಿದೆ.

1958ರಲ್ಲಿ ಆರಂಭವಾದ ಎನ್ಎಂಡಿಸಿ, 1978ರಲ್ಲಿ 1 ಕೋಟಿ ಟನ್ ಕಬ್ಬಿಣದ ಅದಿರನ್ನು ಉತ್ಪಾದಿಸಿತ್ತು. ಇದೀಗ ಇದಕ್ಕೆ ಐದು ಪಟ್ಟು ಹೆಚ್ಚು ಉತ್ಪಾದನೆಯಾಗಿದೆ ಎಂದು ತಿಳಿಸಿದೆ.

‘5 ಕೋಟಿ ಟನ್ ಕಬ್ಬಿಣದ ಅದಿರನ್ನು ಉತ್ಪಾದಿಸುವ ಮೂಲಕ ಎನ್ಎಂಡಿಸಿ ಗಮನಾರ್ಹ ಸಾಧನೆ ಮಾಡಿದೆ. ಈ ಮೈಲಿಗಲ್ಲು ಕಂಪನಿಯ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲಿದೆ’ ಎಂದು ಎನ್ಎಂಡಿಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಮಿತವ ಮುಖರ್ಜಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.