ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿಗೆ ಹದಿಮೂರು ಪ್ರಶಸ್ತಿ

Last Updated 20 ಸೆಪ್ಟೆಂಬರ್ 2021, 13:37 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಪರಿಷತ್ತು (‍‍ಪಿಆರ್‌ಸಿಐ) ಈಚೆಗೆ ಗೋವಾದಲ್ಲಿ ಆಯೋಜಿಸಿದ್ದ ‘ಗ್ಲೋಬಲ್ ಕಮ್ಯುನಿಕೇಷನ್ ಕಾನ್‌ಕ್ಲೇವ್‌’ನಲ್ಲಿ ಎನ್‌ಎಂಡಿಸಿ ಕಂಪನಿಯು ಹದಿಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ವಾರ್ಷಿಕ ವರದಿ ಸಿದ್ಧಪಡಿಸುವಿಕೆ, ವಾರ್ಷಿಕ ವರದಿಯ ಮುಖಪುಟ, ಸಾಮಾಜಿಕ ಜಾಲತಾಣಗಳ ಬಳಕೆ, ಕೋವಿಡ್‌ ಸಂದರ್ಭದಲ್ಲಿ ಮಾನವ ಸಂಪನ್ಮೂಲದ ಬಳಕೆ ಸೇರಿದಂತೆ ಹದಿಮೂರು ವಿಭಾಗಗಳಲ್ಲಿ ಪ್ರಶಸ್ತಿಗಳು ಬಂದಿವೆ ಎಂದು ಪ್ರಕಟಣೆ ತಿಳಿಸಿದೆ.

‘ಗಣಿಗಾರಿಕೆಯಲ್ಲಿ ತೊಡಗಿರುವ ಕಂಪನಿಯಾಗಿ, ಗಣಿಗಾರಿಕೆಯಿಂದ ಲೋಹ ಸಿದ್ಧವಾಗುವವರೆಗಿನ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿ. ನಾವು ಬೇರೆ ಬೇರೆ ಮಾಧ್ಯಮಗಳನ್ನು ಇದಕ್ಕೆ ಬಳಸಿಕೊಳ್ಳುತ್ತೇವೆ’ ಎಂದು ಎನ್‌ಎಂಡಿಸಿ ಕಂಪನಿಯ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ವಿಭಾಗದ ಮುಖ್ಯಸ್ಥ ಪಿ. ಜಯಪ್ರಕಾಶ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT