ಎನ್ಎಂಡಿಸಿ ಹೆಸರಿನಲ್ಲಿ ನೌಕರಿ ಆಮಿಷ
ಬೆಂಗಳೂರು: ‘ಎನ್ಎಂಡಿಸಿ ಲಿಮಿಟೆಡ್ನ ದೋಣಿಮಲೆ ಕಾಂಪ್ಲೆಕ್ಸ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಕಿಡಿಗೇಡಿಗಳು ಹಣಕ್ಕೆ ಬೇಡಿಕೆ ಇರಿಸುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ಎಂಡಿಸಿ ಹೇಳಿದೆ.
ಕಂಪನಿಯು ಇಂತಹ ವ್ಯಕ್ತಿಗಳ ಮೂಲಕ ಉದ್ಯೋಗ ನೀಡುವುದಿಲ್ಲ. ಕಂಪನಿಯಲ್ಲಿ ನೇಮಕ ಪ್ರಕ್ರಿಯೆಯು ಪಾರದರ್ಶಕವಾಗಿ, ವಿವಿಧ ಪರೀಕ್ಷೆಗಳ ಮೂಲಕ ನಡೆಯುತ್ತದೆ. ಫೆಬ್ರುವರಿ 3ರ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಹಾಜರಾಗಿದ್ದವರು ಇಂತಹ ವ್ಯಕ್ತಿಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.