ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿ ಲಾಭ ಶೇ 62ರಷ್ಟು ಹೆಚ್ಚಳ

Published 14 ಫೆಬ್ರುವರಿ 2024, 14:21 IST
Last Updated 14 ಫೆಬ್ರುವರಿ 2024, 14:21 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮವು (ಎನ್‌ಎಂಡಿಸಿ) 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ₹1,469 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹903 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಮೂರನೇ ತ್ರೈಮಾಸಿಕದ ಲಾಭದಲ್ಲಿ ಶೇ 62ರಷ್ಟು ಹೆಚ್ಚಳವಾಗಿದೆ. ವರಮಾನದಲ್ಲಿನ ಏರಿಕೆಯೇ ಲಾಭ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ನಿಗಮವು, ಷೇರುಪೇಟೆಗೆ ಬುಧವಾರ ತಿಳಿಸಿದೆ.

ಕಂಪನಿಯ ಒಟ್ಟು ವರಮಾನವು ₹3,924 ಕೋಟಿಯಿಂದ ₹5,746 ಕೋಟಿಗೆ ಏರಿಕೆಯಾಗಿದೆ. ವೆಚ್ಚವು ₹2,693 ಕೋಟಿಯಿಂದ ₹3,516 ಕೋಟಿಗೆ ಹೆಚ್ಚಳವಾಗಿದೆ.

2023–24ನೇ ಹಣಕಾಸು ವರ್ಷದಲ್ಲಿ ಪ್ರತಿ ಈಕ್ವಿಟಿ ಷೇರಿಗೆ ₹5.75 ಮಧ್ಯಂತರ ಲಾಭಾಂಶ ನೀಡಲು ಆಡಳಿತ ಮಂಡಳಿಯು ಅನುಮೋದನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT