ಮಂಗಳವಾರ, ಸೆಪ್ಟೆಂಬರ್ 21, 2021
29 °C

ಎನ್‌ಎಂಡಿಸಿಗೆ ಎಂಟು ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕಂಪನಿಗಳ ಆಡಳಿತಕ್ಕೆ ಸಂಬಂಧಿಸಿದಂತೆ ಎನ್‌ಎಂಡಿಸಿ ಲಿಮಿಟೆಡ್‌ ಎಂಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

ವರ್ಚುವಲ್‌ ವೇದಿಕೆಯ ಮೂಲಕ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸರ್ಕಾರಿ ಸ್ವಾಮ್ಯದ ಕಂಪನಿಗಳ ಕೊಡುಗೆ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಮೌಲ್ಯ ಸೃಷ್ಟಿಸುವಲ್ಲಿ ಅವುಗಳ ಸಾಮರ್ಥ್ಯವನ್ನು ಪರಿಗಣಿಸಿ  ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ನಾಯಕತ್ವದ ವಿಭಾಗದಲ್ಲಿ ಕಂಪನಿಯ ಸಿಎಂಡಿ ಸುಮಿತ್‌ ದೇಬ್‌ ಅವರು 2021ರ ಸಿಎಂಡಿ ಲೀಡರ್‌ಶಿಪ್‌ ಅವಾರ್ಡ್‌ಗೆ ಭಾಜನರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.