ಮಂಗಳವಾರ, ಜನವರಿ 18, 2022
15 °C

ಡಿಸೆಂಬರ್‌ನಲ್ಲಿ ಕಬ್ಬಿಣದ ಅದಿರು ಉತ್ಪಾದನೆ ಹೆಚ್ಚಳ: ಎನ್‌ಎಂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ‌ಎನ್‌ಎಂಡಿಸಿ ಲಿಮಿಟೆಡ್‌, 2021ರ ಡಿಸೆಂಬರ್‌ನಲ್ಲಿ 39.5 ಲಕ್ಷ ಟನ್‌ ಕಬ್ಬಿಣದ ಅದಿರು ಉತ್ಪಾದನೆ ಮಾಡಿದ್ದು, 34 ಕೋಟಿ ಟನ್‌ ಅದಿರನ್ನು ಮಾರಾಟ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ ಎಂದು ಅದು ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಒಂಭತ್ತು ತಿಂಗಳುಗಳಲ್ಲಿ ಒಟ್ಟು ಉತ್ಪಾದನೆ ಮತ್ತು ಮಾರಾಟವು ಕ್ರಮವಾಗಿ 2.83 ಕೋಟಿ ಟನ್‌ ಮತ್ತು 2.83 ಕೋಟಿ ಟನ್‌ ಆಗಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಉತ್ಪಾದನೆಯಲ್ಲಿ ಶೇಕಡ 30ರಷ್ಟು ಮತ್ತು ಮಾರಾಟದಲ್ಲಿ ಶೇ 27ರಷ್ಟು ಬೆಳವಣಿಗೆ ಸಾಧ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು