ಸೋಮವಾರ, ಸೆಪ್ಟೆಂಬರ್ 28, 2020
24 °C

ಕಬ್ಬಿಣದ ಅದಿರು ಉತ್ಪಾದನೆ ಹೆಚ್ಚಳ : ಎನ್‌ಎಂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಮಿತ್ ದೇಬ್

ಹೈದರಾಬಾದ್‌: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ) ಜುಲೈನಲ್ಲಿ 21.9 ಲಕ್ಷ ಟನ್‌ ಕಬ್ಬಿಣದ ಅದಿರು ಉತ್ಪಾದಿಸಿದೆ.

ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಿಂದಿನ ವರ್ಷದ ಜುಲೈಗೆ ಹೋಲಿಸಿದರೆ ಉತ್ಪಾದನೆಯಲ್ಲಿ ಶೇ 13ರಷ್ಟು ಏರಿಕೆ ಸಾಧ್ಯವಾಗಿದೆ. ಮಾರಾಟವು ಶೇ 7ರಷ್ಟು ಹೆಚ್ಚಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಕೋವಿಡ್‌ನಿಂದಾಗಿ ಕಳೆದ ಕೆಲವು ತಿಂಗಳುಗಳು ಉದ್ಯಮವು ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಆದರೆ, ಇದನ್ನು ಒಂದು ಅವಕಾಶವನ್ನಾಗಿ ಬಳಸಿಕೊಂಡು ನಮ್ಮ ಉತ್ಪಾದನೆ ಸಾಮರ್ಥ್ಯವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸಲಾಯಿತು’ ಎಂದು ಕಂಪನಿಯ ಅಧ್ಯಕ್ಷ ಸುಮಿತ್‌ ದೇಬ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು