ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ರಫ್ತು ನಿಷೇಧಿಸಿಲ್ಲ: ಗೋಯಲ್

Last Updated 27 ಫೆಬ್ರುವರಿ 2023, 6:32 IST
ಅಕ್ಷರ ಗಾತ್ರ

ನವದೆಹಲಿ: ಈರುಳ್ಳಿ ರಫ್ತು ಮೇಲೆ ಯಾವುದೇ ನಿಷೇಧ ಇಲ್ಲ. 2022ರ ಏಪ್ರಿಲ್‌–ಡಿಸೆಂಬರ್‌ ಅವಧಿಯಲ್ಲಿ ₹ 4,347 ಕೋಟಿ ಮೌಲ್ಯದ ಈರುಳ್ಳಿ ರಫ್ತು ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಈರುಳ್ಳಿ ಬಿತ್ತನೆ ಬೀಜದ ಮೇಲೆ ಮಾತ್ರವೇ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಭಾರತದಿಂದ ಯಾವುದೇ ದೇಶಕ್ಕೂ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಿಲ್ಲ. ತಪ್ಪುದಾರಿಗೆ ಎಳೆಯುವಂತಹ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಅವರು ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಈರುಳ್ಳಿ ದರ ಕುಸಿತ ಕಾಣುತ್ತಿದ್ದು, ಕೇಂದ್ರ ಸರ್ಕಾರವು ರಫ್ತು ನಿಷೇಧವನ್ನು ಹಿಂದಕ್ಕೆ ಪಡೆದು ಹೆಚ್ಚುವರಿ ಈರುಳ್ಳಿಯನ್ನು ರಫ್ತು ಮಾಡಬೇಕು. ಆ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರು ಶನಿವಾರ ಮಾಡಿದ್ದ ಟ್ವೀಟ್‌ಗೆ ಪ್ರತಿಯಾಗಿ ಗೋಯಲ್‌ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT