ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಆಲೋಚನೆಯನ್ನು ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಮಂಗಳವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಭಾಗವಾದ ಮತದಾನವು ಬುಧವಾರ ಪೂರ್ಣ ಗೊಂಡ ನಂತರ ಇಂಧನ ಬೆಲೆ ಹೆಚ್ಚಿಸಲಾಗುತ್ತದೆ ಎಂಬ ಊಹಾಪೋಹಗಳನ್ನು ಅವರು ಅಲ್ಲಗಳೆದಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಯುದ್ಧ ಆರಂಭವಾದ ನಂತರದಲ್ಲಿ ಕಚ್ಚಾ ತೈಲದ ಬೆಲೆಯು ಶೇಕಡ 50ರಷ್ಟಕ್ಕಿಂತ ಹೆಚ್ಚಾಗಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗಿಲ್ಲ.

ಕಚ್ಚಾ ತೈಲದ ಬೆಲೆ ಹಾಗೂ ಇಂಧನ ಮಾರಾಟದ ಬೆಲೆಯಲ್ಲಿನ ವ್ಯತ್ಯಾಸವು ಹೆಚ್ಚಳ ಆಗಿರುವುದರಿಂದಾಗಿ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನಗಳ ಮಾರಾಟ ಕಂಪನಿಗಳು ಭಾರಿ ನಷ್ಟ ಅನುಭವಿಸುತ್ತಿವೆ.

ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೆರಿ ವಿಧಾನಸಭೆಗಳ ಚುನಾವಣೆಯ ಭಾಗವಾದ ಮತದಾನವು ಬುಧವಾರ ಪೂರ್ಣಗೊಂಡ ನಂತರ ಇಂಧನ ಬೆಲೆ ಹೆಚ್ಚಿಸಲಾಗುತ್ತದೆ ಎಂಬ ಊಹಾಪೋಹಗಳು ಇವೆ.

ಇಂಧನ ಬೆಲೆ ಹೆಚ್ಚಿಸುವ ಪ್ರಸ್ತಾವ ಇಲ್ಲ ಎಂಬ ಸಂಗತಿಯನ್ನು ಸುಜಾತಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ತಿಳಿಸಿದ್ದಾರೆ.

‘ಕೆಲವು ಕಡೆಗಳಲ್ಲಿ ಜನರು ಭೀತಿಗೆ ಒಳಗಾಗಿ ಇಂಧನ ಖರೀದಿಸಿದ್ದನ್ನು ಕಂಡಿದ್ದೇವೆ. ನಾವು ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಎಲ್ಲ ಪೆಟ್ರೋಲ್ ಬಂಕ್ಗಳ ಮೇಲೆ ನಿಗಾ ಇರಿಸಲಾಗಿದೆ, ಹೆಚ್ಚು ಇಂಧನ ಖರೀದಿ ಆಗುತ್ತಿರುವ ಬಂಕ್ಗಳಿಗೆ ಇಂಧನ ಪೂರೈಕೆಗೆ ಆದ್ಯತೆ ನೀಡಲಾಗಿದೆ’ ಎಂದು ಸುಜಾತಾ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್, ಎಲ್ಪಿಜಿ, ವಿಮಾನ ಇಂಧನದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ, ಬೇಡಿಕೆಗೆ ಸ್ಪಂದಿಸಲು ಆಗುವ ಮಟ್ಟದಲ್ಲಿ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಎಲ್ಪಿಜಿ, ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಕೂಡ ನಮ್ಮಲ್ಲಿ ಸಾಕಷ್ಟಿದೆ. ಬೆಲೆಯಲ್ಲಿ ಸ್ಥಿರತೆ ಇದೆ. ಯಾರೂ ಕೂಡ ಗಾಳಿಮಾತುಗಳನ್ನು ನಂಬಬಾರದು ಎಂದು ಕೋರುವೆ. ಭೀತಿಗೆ ಒಳಗಾಗಿ ಮುಗಿಬಿದ್ದು ಖರೀದಿಸಬೇಕಾಗಿಲ್ಲ, ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಮಾತ್ರ ನೆಚ್ಚಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.