ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಸ್ಕ್‌ಟಾಪ್‌ ಕಂಪ್ಯೂಟರ್‌ ಆಮದಿಗೆ ನಿರ್ಬಂಧ ಇಲ್ಲ: ಡಿಜಿಎಫ್‌ಟಿ

Published 13 ಜನವರಿ 2024, 16:10 IST
Last Updated 13 ಜನವರಿ 2024, 16:10 IST
ಅಕ್ಷರ ಗಾತ್ರ

ನವದೆಹಲಿ: ಡೆಸ್ಕ್‌ಟಾಪ್‌ ಕಂಪ್ಯೂಟರ್‌ಗಳ ಆಮದಿನ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯವು (ಡಿಜಿಎಫ್‌ಟಿ) ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ.‌

ಲ್ಯಾಪ್‌ಟಾಪ್‌, ಪರ್ಸನಲ್ ಕಂಪ್ಯೂಟರ್‌, ಟ್ಯಾಬ್‌, ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ ಮತ್ತು ಸರ್ವರ್‌ಗಳ ಆಮದಿಗೆ ಮಾತ್ರವಷ್ಟೇ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ.

ದೇಶದಲ್ಲಿಯೇ ಇವುಗಳ ಉತ್ಪಾದನೆಗೆ ಉತ್ತೇಜನ ನೀಡಲು ಸರ್ಕಾರವು ಈ ಕ್ರಮಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT