ಗುರುವಾರ , ಏಪ್ರಿಲ್ 2, 2020
19 °C

ಎಟಿಎಂಗಳಲ್ಲಿ ₹2,000 ನೋಟು ಕಡಿಮೆ ಮಾಡಲು ಸೂಚಿಸಿಲ್ಲ: ನಿರ್ಮಲಾ ಸೀತಾರಾಮನ್‌

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ‘ಎಟಿಎಂಗಳಿಗೆ ₹ 2 ಸಾವಿರದ ನೋಟುಗಳನ್ನು ಭರ್ತಿ ಮಾಡುವುದನ್ನು ಕಡಿಮೆ ಮಾಡುವಂತೆ ಬ್ಯಾಂಕ್‌ಗಳಿಗೆ ಯಾವುದೇ ಸೂಚನೆ ನೀಡಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗುರುವಾರ ತಿಳಿಸಿದ್ದಾರೆ.

ಬ್ಯಾಂಕ್‌ಗಳು ಎಟಿಎಂಗಳಿಗೆ ₹ 2,000 ನೋಟುಗಳ ಬದಲಿಗೆ ₹ 500 ಮುಖಬೆಲೆಯ ನೋಟುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಲು ಆರಂಭಿಸಿವೆ. ಕೆಲವು ಬ್ಯಾಂಕ್‌ಗಳು ಕಡಿಮೆ ಮುಖಬೆಲೆಯ ನೋಟುಗಳಿಗಾಗಿ ಎಟಿಎಂಗಳನ್ನು ಮರುಹೊಂದಾಣಿಕೆ ಮಾಡುತ್ತಿವೆ. ಈ ಕುರಿತು ಸಚಿವಾಲಯವು ಯಾವುದೇ ಸೂಚನೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಹಣಕಾಸು ಸಚಿವಾಲಯದಿಂದ ಯಾವುದೇ ಸೂಚನೆ ಇರದಿದ್ದರೂ ಬ್ಯಾಂಕ್‌ಗಳು ಗ್ರಾಹಕರ ಅನುಕೂಲದ ದೃಷ್ಟಿಯಿಂದ ಎಟಿಎಂಗಳಿಗೆ ಕಡಿಮೆ ಮುಖಬೆಲೆಯ ನೋಟುಗಳನ್ನು ಭರ್ತಿ ಮಾಡುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. 

ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಬ್ಯಾಂಕ್‌, ₹2,000 ಮುಖಬೆಲೆಯ ನೋಟುಗಳನ್ನು ಎಟಿಎಂಗಳಿಗೆ ತುಂಬುವುದನ್ನು ನಿಲ್ಲಿಸಲು ನಿರ್ಧರಿಸಿರುವುದಾಗಿ ಈಗಾಗಲೇ ಪ್ರಕಟಿಸಿದೆ. ₹2000 ಮುಖಬೆಲೆ ನೋಟು ಮುದ್ರಿಸುವುದನ್ನು ನಿಲ್ಲಿಸಿರುವುದಾಗಿ ಕಳೆದ ವರ್ಷ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ), ಆರ್‌ಟಿಐ ಪ್ರತಿಕ್ರಿಯೆಯಲ್ಲಿ ತಿಳಿಸಿತ್ತು. 

₹2,000 ನೋಟುಗಳಿಗೆ ಚಿಲ್ಲರೆ ಪಡೆಯುವುದು ಸಮಸ್ಯೆಯಾಗಿ ಪರಿಣಮಿಸಿರುವುದರಿಂದ ಕೆಲವು ಬ್ಯಾಂಕ್‌ಗಳು ಎಟಿಎಂಗಳಲ್ಲಿ ಗರಿಷ್ಠ ಮುಖಬೆಲೆ ನೋಟುಗಳನ್ನು ಬಳಸುವುದನ್ನು ನಿಲ್ಲಿಸಿವೆ. ಆರ್‌ಬಿಐನ ಆರ್‌ಟಿಐ ಪ್ರತಿಕ್ರಿಯೆ ಪ್ರಕಾರ, 2016–17ರಲ್ಲಿ ₹2,000 ಮುಖಬೆಲೆಯ 354.299 ಕೋಟಿ ನೋಟುಗಳನ್ನು ಮುದ್ರಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು