ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಇಲ್ಲ: ಕೇಂದ್ರ

Published 3 ಜನವರಿ 2024, 16:11 IST
Last Updated 3 ಜನವರಿ 2024, 16:11 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಸ್ತುತ ಜಾಗತಿಕ ತೈಲ ಮಾರುಕಟ್ಟೆಯು ಬಿಕ್ಕಟ್ಟಿಗೆ ಸಿಲುಕಿದೆ. ಹಾಗಾಗಿ, ಪೆಟ್ರೋಲ್‌ ಮತ್ತು ಡೀಸೆಲ್‌ ಕಡಿತಗೊಳಿಸುವ ಯಾವುದೇ ಪ್ರಸ್ತಾವವು ಕೇಂದ್ರ ಸರ್ಕಾರದ ಮುಂದಿಲ್ಲ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹೇಳಿದ್ದಾರೆ.

ಬುದವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಚ್ಚಾ ತೈಲ ದರಕ್ಕೆ ಸಂಬಂಧಿಸಿದಂತೆ ನಾವು ಪ್ರಕ್ಷುಬ್ಧ ಎದುರಿಸುತ್ತಿದ್ದೇವೆ. ಹಾಗಾಗಿ, ಇಂಧನ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ತೈಲ ಮಾರಾಟ ಕಂಪನಿಗಳ ಜೊತೆಗೆ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ಷೇರು ಮಾರುಕಟ್ಟೆಯಲ್ಲಿ ಹಿಂದೂಸ್ಥಾನ್‌ ಪೆಟ್ರೋಲಿಯಂ ಕಂಪನಿಯ ಷೇರು ಶೇ 3.24, ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಶೇ 1.8 ಹಾಗೂ ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಷೇರಿನ ಮೌಲ್ಯದ ಶೇ 1.07ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದರು.‌

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕಡಿತವಾಗಲಿದೆ ಎಂದು ವದಂತಿಯಿಂದಾಗಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಷೇರುಗಳು ಕೆಲವು ದಿನಗಳಿಂದ ಒತ್ತಡಕ್ಕೆ ಸಿಲುಕಿವೆ ಎಂದರು. 

ದೈನಂದಿನ ಲೆಕ್ಕಾಚಾರದಲ್ಲಿ ಇಂಧನದ ಬೆಲೆ ಇಳಿಸುವ ಅವಕಾಶವನ್ನು ಕಂಪನಿಗಳಿಗೆ ನೀಡಲಾಗಿದೆ. ಕಳೆದ 21 ತಿಂಗಳಿನಿಂದಲೂ ಈ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT