ಮಂಗಳವಾರ, ಜನವರಿ 25, 2022
25 °C

ಬಿಟ್‌ಕಾಯಿನ್‌ಗೆ ಕರೆನ್ಸಿ ಮಾನ್ಯತೆ ಇಲ್ಲ: ನಿರ್ಮಲಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಟ್‌ಕಾಯಿನ್‌ಗೆ ಕರೆನ್ಸಿಯ ಮಾನ್ಯತೆ ನೀಡುವ ಯಾವುದೇ ಆಲೋಚನೆಯೂ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.

ಬಿಟ್‌ಕಾಯಿನ್‌ ವಹಿವಾಟುಗಳ ಮಾಹಿತಿಯನ್ನು ಸರ್ಕಾರ ಸಂಗ್ರಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಬಿಟ್‌ಕಾಯಿನ್‌ ಡಿಜಿಟಲ್‌ ಕರೆನ್ಸಿ ಆಗಿದ್ದು, ಜನರು ಸರಕು ಮತ್ತು ಸೇವೆಗಳನ್ನು ಖರೀದಿಸಲು ಮತ್ತು ಅಲ್ಲದೆ, ಬ್ಯಾಂಕ್‌ಗಳು, ಕ್ರೆಡಿಟ್‌ ಕಾರ್ಡ್‌ ನೀಡುವರು ಅಥವಾ ಇನ್ಯಾವುದೇ ಮೂರನೇ ವ್ಯಕ್ತಿಗಳನ್ನು ಒಳಗೊಳ್ಳದೆ ಹಣವನ್ನು ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ.

ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ‘ಕ್ರಿಪ್ಟೊಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021’ ಮಂಡಿಸಲು ಮುಂದಾಗಿದೆ. ಆ ಮೂಲಕ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಹೊರಟಿದೆ.

ಬಂಡವಾಳ ವೆಚ್ಚ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ₹ 2.29 ಲಕ್ಷ ಕೋಟಿಗಳಷ್ಟು ಬಂಡವಾಳ ವೆಚ್ವಚ ಮಾಡಿವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಬಂಡವಾಳ ವೆಚ್ಚು ₹ 5.54 ಲಕ್ಷ ಕೋಟಿಗಳಷ್ಟಾಗಲಿದೆ ಎಂದು ಬಜೆಟ್‌ನಲ್ಲಿ ಅಂದಾಜು ಮಾಡಲಾಗಿದೆ. ಇದಕ್ಕೆ ಹೋಲಿಸಿದರೆ ಅಂದಾಜಿನ ಶೇ 41ರಷ್ಟು ವೆಚ್ಚ ಮಾಡಲಾಗಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಹಿಂದಿನ ಹಣಕಾಸು ವರ್ಷದಲ್ಲಿ ಆಗಿದ್ದ ವೆಚ್ಚಕ್ಕೆ ಹೋಲಿಸಿದರೆ ಈ ಬಾರಿ ವೆಚ್ಚದಲ್ಲಿ ಶೇ 38ರಷ್ಟು ಏರಿಕೆ ಕಂಡುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು