ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಆರ್ಥಿಕ ಹಿಂಜರಿತದ ಸೂಚನೆ ಇಲ್ಲ: ನೀತಿ ಆಯೋಗದ ಮಾಜಿ ವಿಪಿ ರಾಜೀವ್‌

Last Updated 21 ನವೆಂಬರ್ 2022, 6:18 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಭಾರತದಲ್ಲಿ ಆರ್ಥಿಕ ಹಿಂಜರಿತದ ಯಾವುದೇ ಸೂಚನೆ ಇಲ್ಲ’ ಎಂದು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಹೇಳಿದ್ದಾರೆ.

‘ಜಾಗತಿಕ ಅನಿಶ್ಚಿತ ಪರಿಸ್ಥಿತಿಯು ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು. ಹೀಗಿದ್ದರೂ 2023–24ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ 6ರಿಂದ ಶೇ 7ರ ಮಟ್ಟದಲ್ಲಿ ಬೆಳವಣಿಗೆ ಕಾಣಲಿದೆ’ ಎಂದು ಅವರು ಹೇಳಿದ್ದಾರೆ.

‘ಅಮೆರಿಕ, ಯುರೋಪ್‌, ಜಪಾನ್‌ ಮತ್ತು ಚೀನಾದಲ್ಲಿ ಏಕಕಾಲಕ್ಕೆ ಆರ್ಥಿಕ ಬೆಳವಣಿಗೆಯು ಇಳಿಮುಖವಾಗಿದೆ. ಇದರಿಂದಾಗಿ ಮುಂಬರುವ ತಿಂಗಳುಗಳಲ್ಲಿ ಜಾಗತಿಕ ಆರ್ಥಿಕತೆಯು ಹಿಂಜರಿತದತ್ತ ಸಾಗಬಹುದು’ ಎಂದು ಕುಮಾರ್‌ ಅಂದಾಜು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT