ಶನಿವಾರ, ಮೇ 15, 2021
27 °C

ಚಿಲ್ಲರೆ ಹಣದುಬ್ಬರದ ಅಂಕಿ–ಅಂಶ ಬಿಡುಗಡೆ ಇಲ್ಲ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ ಇರುವುದರಿಂದ ಏಪ್ರಿಲ್‌ ತಿಂಗಳ ಚಿಲ್ಲರೆ ಹಣದುಬ್ಬರದ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಂಕಿ–ಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಅಧಿಕಾರಿಗಳು ಪ್ರತಿ ತಿಂಗಳೂ 1,114 ನಗರ ಮಾರುಕಟ್ಟೆಗಳು ಮತ್ತು 1,181 ಗ್ರಾಮೀಣ ಮಾರುಕಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಆದರೆ ಲಾಕ್‌ಡೌನ್‌ನಿಂದ ಏಪ್ರಿಲ್‌ನಲ್ಲಿ ಅದು ಸಾಧ್ಯವಾಗಿಲ್ಲ. ಹೀಗಾಗಿ ದೂರವಾಣಿ ಮೂಲಕ ಸಂಗ್ರಹಿಸುವ ಅಂಕಿ–ಅಂಶಗಳನ್ನೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಆದರೆ, ಈ ರೀತಿ ಸಂಗ್ರಹಿಸುವ ಮಾಹಿತಿಯಲ್ಲಿ ಹಾಲಿನ ಉತ್ಪನ್ನಗಳು, ಹಣ್ಣು ಮತ್ತು ತರಕಾರಿಗಳ ಬೆಲೆಯಲ್ಲಿ ಆಗಿರುವ ಏರಿಕೆ  ಒಳಗೊಂಡಿರುವುದಿಲ್ಲ ಎಂದೂ ಹೇಳಿದೆ. ಮಾರ್ಚ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 5.84ರಷ್ಟಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು